Wednesday, December 25, 2019

ಕಣ್ಣೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾರಿಗೆ ಮುತ್ತಿಗೆ

ಕಣ್ಣೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾರಿಗೆ ಮುತ್ತಿಗೆ, ಕೇರಳ ಪ್ರವಾಸ ಮೊಟಕು, ರಾಜ್ಯಕ್ಕೆ ವಾಪಸ್
ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸಂದರ್ಭ ಮಂಗಳೂರಿನಲ್ಲಿ ಪೊಲೀಸರು ಗುಂಡು ಹಾರಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿ ಕಲ್ಲು ತೋರಿ ಪ್ರತಿಭಟನೆ ನಡೆಸಿದ ಘಟನೆ ಕೇರಳದ ಕಣ್ಣೂರಿನಲ್ಲಿ 2019 ಡಿಸೆಂಬರ್ 24ರ ಮಂಗಳವಾರ ಘಟಿಸಿತು.

ಕೇರಳ
ಪ್ರವಾಸದಲ್ಲಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿತು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ, ಕಲ್ಲುತೂರಾಟ ನಡೆದಿತ್ತು. ವೇಳೆ ಪೊಲೀಸರು ಹಾರಿಸಿದ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು.

ಕಣ್ಣೂರಿನಲ್ಲಿ ಬಿಎಸ್ ಯಡಿಯೂರಪ್ಪ  ಅವರು ದೇವಸ್ಥಾನಕ್ಕೆ ಭೇಟಿ ನೀಡುವ ವೇಳೆ ಡಿವೈಎಫ್ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿತು. ಯಡಿಯೂರಪ್ಪ ಅವರ ಕಾರಿನ ಮೇಲೆ ಕಲ್ಲು ತೂರಾಟವೂ ನಡೆದಿದೆ ಎಂದು ವರದಿ ತಿಳಿಸಿತು.

ಕಣ್ಣೂರಿನ ಸಮೀಪದ ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ತೆರಳಿದ್ದರು. ಅಲ್ಲಿ ವಿಶೇಷ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಅವರ ಕಾರನ್ನು ಅಡ್ಡಗಟ್ಟಿದ ಪ್ರತಿಭಟನಾಕಾರರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿತು.

ಯಡಿಯೂರಪ್ಪ ಅವರ ಕಾರಿಗೆ ಪ್ರತಿಭಟನಾಕಾರನೊಬ್ಬ ಅಡ್ಡ ಮಲಗಿ ಕಾರನ್ನು ತಡೆದ, ಚಾಲಕ ಚಾಕಚಕ್ಯತೆಯಿಂದ ಆತನನ್ನು ತಪ್ಪಿಸಿ ಮುಂದೆ ವಾಹನ ಮುಂದೆ ಚಲಾಯಿಸಿದರು ಎಂದು ವರದಿ ಹೇಳಿತು.

ಹಿಂದಿನ ದಿನ ರಾತ್ರಿ ಯಡಿಯೂರಪ್ಪ ಕೇರಳಕ್ಕೆ ತಲುಪಿದಾಗಲೂ ಸಹ ಕೆಲವರು ಬಂದು ಪ್ರತಿಭಟನೆ ನಡೆಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು.

ಯಡಿಯೂರಪ್ಪ ಅವರು ಮಂಗಳವಾರ ಮತ್ತು ಬುಧವಾರ ಕೇರಳದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬುಧವಾರ ಕಣ್ಣೂರಿನಿಂದ ಮಂಗಳೂರಿಗೆ ಆಗಮಿಸಬೇಕಿದ್ದ ಯಡಿಯೂರಪ್ಪ ಅವರು ಮಂಗಳವಾರ ರಾತ್ರಿಯೇ ಮಂಗಳೂರಿಗೆ ವಾಪಸಾಗಿ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ವರದಿ ತಿಳಿಸಿದೆ.

No comments:

Advertisement