ಪ್ರತಿಭಟನೆ
ಹೆಸರಿನಲ್ಲಿ ಹಾನಿ: ಯೋಗಿ ಆದಿತ್ಯನಾಥ್ ಎಚ್ಚರಿಕೆ
ಲಕ್ನೋ: ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡುವ ಪ್ರತಿಭಟನಾಕರರ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2019 ಡಿಸೆಂಬರ್ 19ರ ಗುರುವಾರ ಎಚ್ಚರಿಸಿದರು.
ಪೌರತ್ವ
ತಿದ್ದುಪಡಿ ಕಾಯ್ದೆ ವಿರೋಧಿಸಿ ಲಕ್ನೋ, ಸಂಭಲ್ ಮತ್ತು
ಮಾವೋನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರು ಹಲವು ವಾಹನ, ಪೊಲೀಸ್ ಔಟ್ ಪೋಸ್ಟ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಶಾಂತಿ
ಕದಡಲು ಯತ್ನಿಸುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದರು.
ರಾಜ್ಯದಲ್ಲಿ
ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು ನಾನು ಸಹಿಸುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿರುವವರನ್ನು ಗುರುತಿಸಿ, ಅವರ ಆಸ್ತಿ ಜಪ್ತಿ ಮಾಡಿ, ಹರಾಜು ಹಾಕಲಾಗುವುದು ಎಂದು ಯೋಗಿ ಎಚ್ಚರಿಸಿದರು.
ಗುರುವಾರ
ಲಖನೌನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ೫೦ ಮಂದಿಯನ್ನು ಬಂಧಿಸಲಾಗಿದೆ.
ಅಲ್ಲದೆ ವಾರಾಣಸಿಯಲ್ಲಿ ೧೫೦ ಮಂದಿ, ಫಿರೋಜಾಬಾದ್ ನಲ್ಲಿ ೧೪೪ ಮಂದಿ ಹಾಗೂ ಆಗ್ರಾದಲ್ಲಿ ೧೫೫ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
No comments:
Post a Comment