Wednesday, April 1, 2020

೨೯ ಮುಖ್ಯ ವಿಷಯಗಳಿಗೆ ಮಾತ್ರ ಸಿಬಿಎಸ್ ಇ ಪರೀಕ್ಷೆ

೨೯ ಮುಖ್ಯ ವಿಷಯಗಳಿಗೆ ಮಾತ್ರ ಸಿಬಿಎಸ್ ಇ ಪರೀಕ್ಷೆ
ನವದೆಹಲಿ: ಕೋರನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಾಧ್ಯಮಿಕ ಶಿಕ್ಷಣದ ಕೇಂದ್ರೀಯ ಮಂಡಳಿಯು (ಸಿಬಿಎಸ್) ಬಡ್ತಿ ಮತ್ತು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ನಿರ್ಣಾಯಕವಾದ ೨೯ ಮುಖ್ಯ ವಿಷಯಗಳಿಗೆ ಸಂಬಂಧಿಸಿದಂತೆ ಮಾತ್ರ ೧೦ ಮತ್ತು ೧೨ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ ಆರ್ ಡಿ) ಸಚಿವ ರಮೇಶ ಪೋಖ್ರಿಯಾಲ್ ಅವರು 2020 ಏಪ್ರಿಲ್ 01ರ ಬುಧವಾರ ಹೇಳಿದರು.

1ರಿಂದ 8ನೇ ತರಗತಿವರೆಗಿನ ಎಲ್ಲ ಮಕ್ಕಳನ್ನೂ ಉತ್ತೀರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಕೊರೋನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಸಿಬಿಎಸ್ ಪರೀಕ್ಷೆಗಳನ್ನು ದೇಶಾದ್ಯಂತ ಮುಂದೂಡಲಾಗಿತ್ತು.

ಕೊರೋನಾವೈರಸ್ ಸೋಂಕಿನ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಬಡ್ತಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅಗತ್ಯವಾದ ೨೯ ಮುಖ್ಯ ವಿಷಯಗಳಿಗೆ ಮಾತ್ರ ಮಂಡಳಿ ಪರೀಕ್ಷೆಗಳನ್ನು ನಡೆಸುವಂತೆ ತಾವು ಸಿಬಿಎಸ್ಇಗೆ ಸಲಹೆ ಮಾಡಿರುವುದಾಗಿ ಪೋಖ್ರಿಯಾಲ್ ಹೇಳಿದರು.

ಮಂಡಳಿಯು ಪರೀಕ್ಷೆಗಳನ್ನು ನಡೆಸಲು ಸೂಕ್ತವಾದ ಸಮಯ ಬಂದಾಗ ಸೂಕ್ತ ಸೂಚನೆಗಳನ್ನು ನೀಡಿ ೨೯ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವುದು ಎಂದು ಸಚಿವರು ನುಡಿದರು.

No comments:

Advertisement