Tuesday, June 2, 2020

ಅಸ್ಸಾಮ್ ಬರಾಕ್ ಕಣಿವೆಯಲ್ಲಿ ಭೂಕುಸಿತ: ೨೦ ಸಾವು

ಅಸ್ಸಾಮ್ ಬರಾಕ್ ಕಣಿವೆಯಲ್ಲಿ ಭೂಕುಸಿತ: ೨೦ ಸಾವು

ಗುವಾಹಟಿ: ಭಾರೀ ಮಳೆ ಹಾಗೂ ಪ್ರವಾಹದ ಪರಿಣಾಮವಾಗಿ ಅಸ್ಸಾಮಿನ ಬರಾಕ್ ಕಣಿವೆ ಪ್ರದೇಶದ ಮೂರು ಜಿಲ್ಲೆಗಳಲ್ಲಿ  2020 ಜೂನ್ 02ರ ಮಂಗಳವಾರ  ಸಂಭವಿಸಿದ ಭೂಕುಸಿತಗಳಲ್ಲಿ ಇಪ್ಪತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಮಂಗಳವಾರ ಮುಂಜಾನೆ ಸಂಭವಿಸಿದ ಭೂಕುಸಿತದಿಂದಾಗಿ ಕರೀಮ್ಗಂಜ್ ಜಿಲ್ಲೆಯಲ್ಲಿ ಕನಿಷ್ಠ ಆರು ಜನರು, ಕ್ಯಾಚರ್ ಮತ್ತು ಹೈಲಕಂಡಿ ಜಿಲ್ಲೆಗಳಲ್ಲಿ ತಲಾ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಸಂತ್ರಸ್ತರ ಸಾವಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದು, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು.

ಅಸ್ಸಾಮಿನ ಬರಾಕ್ ಕಣಿವೆಯಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ ಪ್ರಾಣಹಾನಿ ದುರಂತಗಳು ಘಟಿಸಿದ್ದು, ಸ್ಥಳೀಯ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವೆಎಂದು ಅವರು ಟ್ವೀಟ್ ಮಾಡಿದರು.

ಪ್ರವಾಹದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ನಲ್ಬಾರಿ, ಗೋಲ್ಪಾರ, ನಾಗಾನ್, ಹೊಜೈ, ಪಶ್ಚಿಮ ಕಾರ್ಬಿ ಆಂಗ್ಲಾಂಗ್, ದಿಬ್ರುಗ ಚಿಡಿh ಮತ್ತು ಟಿನ್ಸುಕಿಯಾ ಏಳು ಜಿಲ್ಲೆಗಳ ೩೫೬ ಗ್ರಾಮಗ ಲಕ್ಷಾಂತರ ಜನರು ಬಾಧಿತರಾಗಿದ್ದಾರೆ.

ಪ್ರವಾಹವು ಇಲ್ಲಿಯವರೆಗೆ ,೬೭೮ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳನ್ನು ಹಾನಿಗೊಳಿಸಿದೆ ಮತ್ತು ೪೪,೩೩೧ ಸಾಕು ಪ್ರಾಣಿಗಳು ಮತ್ತು ,೩೫೦ ಕೋಳಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

No comments:

Advertisement