Tuesday, August 4, 2020

ಇಂತಿರ್ಪುದು ಅಯೋಧ್ಯಾ ರಾಮಮಂದಿರಂ..!

ಇಂತಿರ್ಪುದು ಅಯೋಧ್ಯಾ ರಾಮಮಂದಿರಂ..!

ನವದೆಹಲಿ: ಅಯೋಧ್ಯೆಯಲ್ಲಿನ ಸರಯೂ ನದಿ ತೀರದಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ 2020 ಆಗಸ್ಟ್ ೫ರ ಬುಧವಾರ ಭೂಮಿ ಪೂಜೆ ನಡೆಯಲಿದ್ದು ಇಡೀ ದೇಗುಲ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಇದೇ ವೇಳೆಯಲ್ಲಿ ರೂಪುಗೊಳ್ಳಲಿರುವ ಯೋಜಿತ ದೇವಾಲಯದ ಹೊರ ರಚನೆಯ ನೀಲನಕ್ಷೆಯನ್ನು ಸರ್ಕಾರ  2020 ಆಗಸ್ಟ್ 04ರ ಮಂಗಳವಾರ ಬಿಡುಗಡೆ ಮಾಡಿತು.

ಗೋಪುರಗಳು, ಕಂಬಗಳು ಮತ್ತು ಗುಮ್ಮಟಗಳನ್ನು ಒಳಗೊಂಡ ಮೂರು ಅಂತಸ್ತಿನ ಭವ್ಯವಾದ ರಚನೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ. ಸದ್ಯದ ಯೋಜನೆಯ ಪ್ರಕಾರ ದೇಗುಲವು ಮೊದಲು ರೂಪಿಸಿದ್ದಕ್ಕಿಂತಲೂ ಎರಡು ಪಟ್ಟು ದೊಡ್ಡದಾಗುವ ಸಾಧ್ಯತೆ ಇದೆ.

ಭೂ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ದೇಗುಲದ ಮೂಲ ಯೋಜನೆಯನ್ನು ಬದಲಿಸಿ ಹೊಸ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ದೇವಾಲಯವನ್ನು ನಾಗರ ಶೈಲಿಯ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾಗುತ್ತಿದೆ. ಹೆಚ್ಚಿನ ಭಕ್ತರಿಗೆ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ಎರಡು ಗುಮ್ಮಟಗಳ ಬದಲಿಗೆ ಈಗ ಐದು ಗುಮ್ಮಟಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.

ಕಳೆದ ವರ್ಷ ಸುಪ್ರೀಂ ಕೋರ್ಟ್ ಅಯೋಧ್ಯೆಯ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ನಂತರ ವಿನ್ಯಾಸವನ್ನು ಪುನರುಜ್ಜೀವನಗೊಳಿಸಲಾಯಿತು. ಅಯೋಧ್ಯೆಯಲ್ಲಿ ಹೊಸ

ಮಸೀದಿ ನಿರ್ಮಿಸಲು ಐದು ಎಕರೆ ಜಾಗವನ್ನು ಮಂಜೂರು ಮಾಡುವಂತೆ ನ್ಯಾಯಾಲಯ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಸುಪ್ರೀಂಕೋರ್ಟ್ ಆದೇಶದಂತೆ ಹೊಸ ಮಸೀದಿ ನಿರ್ಮಾಣಕ್ಕಾಗಿ ಮಂಜೂರು ಮಾಡಲಾದ ಎಕರೆ ಪರ್ಯಾಯ ಭೂಮಿಯ ದಾಖಲೆ ಪತ್ರಗಳನ್ನು ಸೋಮವಾರ ಹಸ್ತಾಂತರಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು "ರಾಮಮಂದಿರ ನಿರ್ಮಾಣ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರ ನೆನಪಿಗಾಗಿ ಮಣ್ಣಿನ ಹಣತೆಗಳನ್ನು ಬೆಳಗಿಸುವಂತೆ, ದೇವಾಲಯಗಳನ್ನು ಅಲಂಕರಿಸುವಂತೆ  ಮತ್ತು ರಾಮಾಯಣವನ್ನು ಪಠಿಸುವಂತೆ ಜತೆಗೆ ಮನವಿ ಮಾಡಿದ್ದಾರೆ.

ಅಯೋಧ್ಯೆಯಲ್ಲಿ
೧೯೯೨ ಡಿಸೆಂಬರ್‌ನಲ್ಲಿಕರಸೇವಕರುನೆಲಸಮಗೊಳಿಸಿದ್ದ ವಿವಾದಾತ್ಮಕ ಬಾಬರಿ ಮಸೀದಿ ಕಟ್ಟಡವಿದ್ದ ಜಾಗದಲ್ಲೇ ಪುರಾತನ ರಾಮಮಂದಿರ ಇತ್ತು. ಈಗ ಅಲ್ಲೇ ಭವ್ಯ ಮಂದಿರ ಎದ್ದು ನಿಲ್ಲಲಿದೆ ಎಂದು ಅವರು ಹೇಳಿದರು.

No comments:

Advertisement