Wednesday, August 5, 2020

ಹೊಸ ಯುಗದ ಆರಂಭ: ಅಮಿತ್ ಶಾ

ಹೊಸ ಯುಗದ ಆರಂಭ: ಅಮಿತ್ ಶಾ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರಕ್ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿರುವುದು ಹೊಸ ಯುಗದ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ 2020  ಆಗಸ್ಟ್ 05ರ ಬುಧವಾರ ಹೇಳಿದರು.

ಕೋವಿಡ್-೧೯ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಇರುವ ಶಾ, ಭೂಮಿ ಪೂಜೆ ಸಮಾರಂಭ ನಡೆದ ದಿನವನ್ನುಐತಿಹಾಸಿಕ ದಿನ ಎಂದು ಬಣ್ಣಿಸಿದರು.

ಇಂದು ಭಾರತಕ್ಕೆ ಐತಿಹಾಸಿಕ ಮತ್ತು ಹೆಮ್ಮೆಯ ದಿನ. ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನಡೆಸಿದರು ಮತ್ತು ಭವ್ಯ ರಾಮ ಮಂದಿರಕ್ಕೆ ಅಡಿಪಾಯ ಹಾಕಿದರು, ಇದು ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಸುವರ್ಣ ಅಧ್ಯಾಯವನ್ನು ಸೂಚಿಸುತ್ತದೆ ಮತ್ತು ಹೊಸ ಯುಗವನ್ನು ಪ್ರಾರಂಭಿಸಿದೆ ಎಂದು ಅವರು ಟ್ವೀಟಿನಲ್ಲಿ ಬರೆದರು.

ರಾಮ ಮಂದಿರ ಶಿಲಾನ್ಯಾಸ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಿದ ಅವರು, ಮೋದಿಯವರ ನಿರ್ಣಾಯಕ ನಾಯಕತ್ವದಿಂದಾಗಿ ದೇವಾಲಯದ ನಿರ್ಮಾಣ ಸಾಧ್ಯವಾಗಿದೆ ಎಂದರು.

ಭಾರತೀಯ ಸಂಸ್ಕೃತಿ ಮತ್ತು ಅದರ ಮೌಲ್ಯಗಳನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಮೋದಿ ಸರ್ಕಾರ ಯಾವಾಗಲೂ ಬದ್ಧವಾಗಿರುತ್ತದೆ’ ಎಂದೂ ಅವರು ಹೇಳಿದರು.

ಮತ್ತೊಂದು ಟ್ವೀಟ್ನಲ್ಲಿ ಅವರು, ‘ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣವು ಶತಮಾನಗಳಿಂದಲೂ ವಿಶ್ವಾದ್ಯಂತ ಹಿಂದೂಗಳ ನಂಬಿಕೆಯ ಸಂಕೇತವಾಗಿದೆ. ಭೂಮಿ ಪೂಜೆ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೋಟ್ಯಂತರ ಜನರ ನಂಬಿಕೆಯನ್ನು ಗೌರವಿಸಿದ್ದಾರೆ ಮತ್ತು ಇದಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದರು.

ಶ್ರೀರಾಮನ ಪಾತ್ರ ಮತ್ತು ಜೀವನದ ತತ್ತ್ವವು ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದೆ ಮತ್ತು ದೇವಾಲಯವು ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಶಾ ಹೇಳಿದರು.

ಭಗವಾನ್ ಶ್ರೀ ರಾಮನ ಆದರ್ಶಗಳು ಮತ್ತು ಆಲೋಚನೆಗಳು ಭಾರತದ ಆತ್ಮದಲ್ಲಿ ನೆಲೆಸಿದೆ. ಅವರ ಪಾತ್ರ ಮತ್ತು ಜೀವನದ ತತ್ವವು ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದೆ. ರಾಮಮಂದಿರದ ನಿರ್ಮಾಣದೊಂದಿಗೆ, ಶುಭ ಭೂಮಿ ತನ್ನ ಪೂರ್ಣ ವೈಭದೊಂದಿಗೆ ಜಗತ್ತಿನಲ್ಲಿ ಮತ್ತೆ ಮೇಲೇರುತ್ತದೆ. ಧರ್ಮ ಮತ್ತು ಅಭಿವೃದ್ಧಿಯ ಸಮನ್ವಯವು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತz’ ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದರು.

ರಾಮ ಮಂದಿರ ನಿರ್ಮಾಣವು ಶತಮಾನಗಳ ನಿರಂತರ ತ್ಯಾಗ, ಹೋರಾಟ, ತಪಸ್ಸು ಮತ್ತು ರಾಮನ ಅಸಂಖ್ಯಾತ ಭಕ್ತರ ತ್ಯಾಗದ ಪರಿಣಾಮ ಎಂದು ಶಾ ಹೇಳಿದರು.

No comments:

Advertisement