Wednesday, September 30, 2020

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

 ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ನವದೆಹಲಿ: ಅಕ್ಟೋಬರ್ ೪ಕ್ಕೆ ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವೆಗಳ (ಯುಪಿಎಸ್ಸಿ) ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ 2020 ಸೆಪ್ಟೆಂಬರ್ 30ರ ಬುಧವಾರ ನಿರಾಕರಿಸಿತು.

ಕೊರೊನಾ ಸೋಂಕಿನ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ನಿರ್ದೆಶನ ನೀಡಿತು.

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್ಸಿ) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಗೆ ೫೦ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಯುಪಿಎಸ್ ಸಿ ಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು.

ಕೋವಿಡ್-೧೯ ಕಾರಣದಿಂದಾಗಿ ಬಾರಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ನಾಗರಿಕ ಸೇವೆಗಳ ಆಕಾಂಕ್ಷಿಗಳಲ್ಲಿ ಕೆಲವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ವರ್ಷದ ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆಗೆ ಸುಮಾರು ಲಕ್ಷ ಅಭ್ಯರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ದೇಶದ ೭೨ ನಗರಗಳಲ್ಲಿ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಮೇ ೩೧ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಕೋವಿಡ್ ಕಾರಣಗಳಿಂದಾಗಿ ಮುಂದೂಡಲಾಗಿತ್ತು. ಜೂನ್ ೫ರಂದು ಯುಪಿಎಸ್ಸಿ ಪರಿಷ್ಕೃತ ಪರೀಕ್ಷಾ ಪಟ್ಟಿ ಪ್ರಕಟಿಸಿತ್ತು.

No comments:

Advertisement