Friday, December 18, 2020

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ಗೆ ಕೊರೋನಾ

 ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ಗೆ ಕೊರೋನಾ

ಡೆಹರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು 2020 ಡಿಸೆಂಬರ್ 18ರ ಶುಕ್ರವಾರ ದೃಢಪಟಿತು.

ಕುರಿತು ಸ್ವತಃ ಟ್ವೀಟ್ ಮಾಡಿರುವ ರಾವತ್, ಕೋವಿಡ್-೧೯ ದೃಢಪಟ್ಟ ಬಳಿಕ ಹೋಮ್ ಕ್ವಾರಂಟೈನಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪ್ರತ್ಯೇಕ ವಾಸಕ್ಕೆ ಒಳಗಾಗಿ ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ರಾವತ್ ಮನವಿ ಮಾಡಿದರು.

ಇಂದು ನಾನು ಕೊರೊನಾ ಪರೀಕ್ಷೆಯನ್ನು ಮಾಡಿಸಿದ್ದೇನೆ ಮತ್ತು ವರದಿಯು ಪಾಸಿಟಿವ್ ಬಂದಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಮತ್ತು ನನಗೆ ಯಾವುದೇ ಲಕ್ಷಣಗಳಿಲ್ಲ. ವೈದ್ಯರ ಸಲಹೆಯ ಮೇರೆಗೆ ನಾನು ಮನೆಯಲ್ಲೇ ಪ್ರತ್ಯೇಕವಾಸಕ್ಕೆ ಒಳಗಾಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪ್ರತ್ಯೇಕ ವಾಸಕ್ಕೆ ಮುಂದಾಗಿ ಮತ್ತು ಪರೀಕ್ಷೆಗೆ ಒಳಗಾಗಿ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಉತ್ತರಾಖಂಡದಲ್ಲಿ ,೦೬೨ ಸಕ್ರಿಯ ಪ್ರಕರಣಗಳಿದ್ದು, ೭೭,೨೪೩ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಮತ್ತು ಈವರೆಗೆ ,೩೮೪ ಜನರು ಸಾವಿಗೀಡಾಗಿದ್ದಾರೆ.

No comments:

Advertisement