Tuesday, August 16, 2022

ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಆ ʼವಿಡಿಯೋʼ ಯಾವುದು?

 ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಆ ʼವಿಡಿಯೋʼ ಯಾವುದು?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆ ʼವೈರಲ್‌ʼ ವಿಡಿಯೋವನ್ನು ಮೆಚ್ಚಿಕೊಂಡು ರಿಟ್ವೀಟ್‌ ಮಾಡಿದ್ದಾರೆ. ಅದನ್ನು ಮೊದಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ರಿಟ್ವೀಟ್‌ ಮಾಡಿರುವ ಪ್ರಧಾನಿ “ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗೈದ ಕರ್ನಾಟಕದ ಅಪ್ರತಿಮ ಸಾಧಕರ ಅತ್ಯುತ್ತಮ ಪ್ರಯತ್ನʼ ಎಂಬುದಾಗಿ ಕನ್ನಡದಲ್ಲಿಯೇ ಶೀರ್ಷಿಕೆ ನೀಡಿ ಹೊಗಳಿದ್ದಾರೆ.

ಈ ವಿಡಿಯೋವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಲುವಾಗಿ ರಾಜ್ಯಸಭಾ ಸದಸ್ಯ, ಕನ್ನಡ ಚಿತ್ರನಟ ಜಗ್ಗೇಶ್‌ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರು ನಿರ್ದೇಶಿಸಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್‌ ವೈರಲ್‌ ಆಗಿತ್ತು. ಈವರೆಗೆ ಈ ವಿಡಿಯೋ ನೋಡಿದವರ ಸಂಖ್ಯೆ 10 ಲಕ್ಷವನ್ನೂ ಮೀರಿದೆ.

ವಿಡಿಯೋ ಹಾಡಿಗೆ ಪ್ರವೀಣ್ ಡಿ. ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ. ನಟರಾದ ಸುದೀಪ್‌, ಶಿವರಾಜಕುಮಾರ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್, ಅನಂತನಾಗ್, ಅರ್ಜುನ್ ಸರ್ಜಾ, ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಸಾಹಿತಿ ಎಸ್.ಎಲ್. ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿಗೆ ಜೊತೆಯಾಗಿದ್ದಾರೆ.

ನನಗೆ ಚಿಕ್ಕವನಾಗಿದ್ದಾಗಿನಿಂದಲೇ ‘ಮಿಲೇ ಸುರ್ ಮೇರಾ ತುಮಾರ’ ಹಾಡು ಬಲು ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕು ಎಂಬ ಆಸೆಯಿತ್ತು. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಯಿತು” ಎಂದು ನಿರ್ಮಾಪಕ ಜಗ್ಗೇಶ್‌ ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದಾರೆ ಪ್ರಧಾನಿ ಮೋದಿ ಅವರು ಮೆಚ್ಚಿದ ಈ ವಿಡಿಯೋ ಯಾವುದು? ಕೆಳಗೆ ಕ್ಲಿಕ್‌ ಮಾಡಿ ನೋಡಿ.



No comments:

Advertisement