Tuesday, August 2, 2022

ಇಂದಿನ ಇತಿಹಾಸ History Today ಆಗಸ್ಟ್‌ 02

ಇಂದಿನ ಇತಿಹಾಸ History Today ಆಗಸ್ಟ್‌ 02

2022: ವಾಷಿಂಗ್ಟನ್‌: ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದಲ್ಲಿ 2022 ಜುಲೈ 31 ಭಾನುವಾರ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದರು. ʼಮೋಸ್ಟ್ ವಾಂಟೆಡ್ʼ ಉಗ್ರ ಎಂಬುದಾಗಿ ಪರಿಗಣಿಸಲಾಗಿದ್ದ ಆಯ್ಮಾನ್ ಅಲ್‌ ಝವಾಹಿರಿ, 2001ರ ಸೆಪ್ಟೆಂಬರ್‌ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನಾಗಿದ್ದ. ಸುದ್ದಿ ವಾಹಿನಿಯಲ್ಲಿ ಮಾತನಾಡಿದ ಬೈಡನ್, ಕಾಬೂಲಿನಲ್ಲಿ ನಡೆಸಲಾದ ದಾಳಿಯಲ್ಲಿ ಝವಾಹಿರಿ ಹತನಾಗಿದ್ದಾನೆ ಎಂದು ಪ್ರಕಟಿಸಿದರು. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ’ ಎಂದು ಬೈಡನ್ ಹೇಳಿದರು. ಕಾಬೂಲ್‌ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು  ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. 2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಗಾನಿಸ್ತಾನದಿಂದ ವಾಪಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟಿನವನಾಗಿದ್ದ ಝವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ ನಂತರ ಹಿಂಸಾತ್ಮಕ ಮೂಲಭೂತವಾದದಲ್ಲಿ ತೊಡಗಿಕೊಂಡಿದ್ದ.  2001ರ ಸೆಪ್ಟೆಂಬರ್‌ 11ರ ದಾಳಿ ಬಳಿಕ ತಲೆಮರೆಸಿಕೊಂಡಿದ್ದ. ಒಸಾಮಾ ಬಿನ್ ಲಾಡೆನ್ನನನ್ನು ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್‌ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.

2020: ನವದೆಹಲಿ/ ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರಿಗೆ ಕೊರೋನಾ ಸೋಂಕು ತಗುಲಿರವುದು 2020 ಆಗಸ್ಟ್ 02ರ ಭಾನುವಾರ ದೃಢಪಟ್ಟತು. ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ ಅಮಿತ್ ಶಾ  ‘ಕೊರೊನಾದ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಪರೀಕ್ಷೆ ಮಾಡಿಸಿಕೊಂಡಿದ್ದೇನೆವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆನನ್ನ ಆರೋಗ್ಯ ಚೆನ್ನಾಗಿದೆಆದರೆವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ನೀವೆಲ್ಲರೂ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂದು ಬರೆದರು.  ಕೆಲ ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಿದ್ದರುಅವರ ಸಂಪರ್ಕಕ್ಕೆ ಬಂದಿರುವ ಸಚಿವರನ್ನು ಪತ್ತೆ ಹಚ್ಚಿಕ್ವಾರಂಟ್ವೈನಿನಲ್ಲಿ ಇಡಲಾಗುತ್ತದೆ ಎಂದು ಸುದ್ದಿ ಮೂಲಗಳು ಹೇಳಿದವು.  ಆಗಸ್ಟ್  ರಂದು ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ಜನ್ಮದಿನದ ಪ್ರಯುಕ್ತ ಭಾರತೀಯ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್ಏರ್ಪಡಿಸಿದ್ದ ಆನ್ ಲೈನ್  ಸಮಾವೇಶದಲ್ಲಿ ಶಾ ಅವರು ಭಾಗವಹಿಸಿ ಮಾತನಾಡಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ಮುಂಬೈಕೊರೋನಾವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಬಾಲಿವುಡ್ ಚಿತ್ರ ನಟ ಅಮಿತಾಭ್ ಬಚ್ಚನ್ 2020 ಆಗಸ್ಟ್ 02ರ ಭಾನುವಾರ ಬಿಡುಗಡೆಯಾದರು. ಆಸ್ಪತ್ರೆಗೆ ದಾಖಲಾದ ೨೩ ದಿನಗಳ ಬಳಿಕ ಅಮಿತಾಬ್ ಬಚ್ಚನ್ ಬಿಡುಗಡೆಯಾಗಿದ್ದುಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ  ಚಿಕಿತ್ಸೆ ಮುಂದುವರೆದಿದೆ೭೭ ವರ್ಷದ ಅಮಿತಾಬ್ ಬಚ್ಚನ್ ಅವರಿಗೆ ಜುಲೈ ೧೧ ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ನಂತರ ಅವರ ಪುತ್ರ ಅಭಿಷೇಕ್ ಬಚ್ಚನ್ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳಿಗೂ ಕೋವಿಡ್ ಇರುವುದು ಬೆಳಕಿಗೆ ಬಂದಿತ್ತು.  ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅಮಿತಾಬ್ ಅವರು ಮುಂಬೈನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿದರು. ನನ್ನ ಕೋವಿಡ್ ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿದೆನನ್ನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆನಾನು ಮನೆಗೆ ಮರಳಿ ಹೋಮ್ ಕ್ವಾರಂಟೈನ್ ಆಗಿದ್ದೇನೆದೇವರ ಕೃಪೆಅಪ್ಪ-ಅಮ್ಮನ ಆಶೀರ್ವಾದಆತ್ಮೀಯ ಸ್ನೇಹಿತರ ಪ್ರಾರ್ಥನೆಅಭಿಮಾನಿಗಳ ಹರಕೆ ಮತ್ತು ನಾನಾವತಿ ಆಸ್ಪತ್ರೆಯ ಅತ್ಯುತ್ತಮ ಆರೈಕೆ ಮತ್ತು ಶುಶ್ರೂಷೆಯಿಂದ ನನಗೆ  ದಿನವನ್ನು ಕಾಣಲು ಸಾಧ್ಯವಾಗಿದೆ ಎಂದು ಅಮಿತಾಬ್ ಬಚ್ಚನ್  ಟ್ವಿಟ್ಟರ್ ಸಂದೇಶದಲ್ಲಿ ಬರೆದರು. (ವಿವರಗಳಿಗೆ ಇಲ್ಲಿ  ಕ್ಲಿಕ್  ಮಾಡಿರಿ) 

ಇಂದಿನ ಇತಿಹಾಸ  History Today ಆಗಸ್ಟ್ 02  (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
-ಸಂಗ್ರಹ: ನೆತ್ರಕೆರೆ ಉದಯಶಂಕರ 

No comments:

Advertisement