Friday, August 12, 2022

ಇಂದಿನ ಇತಿಹಾಸ History Today ಆಗಸ್ಟ್‌ 11

 ಇಂದಿನ ಇತಿಹಾಸ History Today ಆಗಸ್ಟ್‌ 11

2022: ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) 2022 ಆಗಸ್ಟ್‌ 11ರ ಗುರುವಾರ ರದ್ದು ಪಡಿಸಿದ ಕರ್ನಾಟಕ ಹೈಕೋರ್ಟ್‌, ‘ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು’ ಎಂದು ಚಾರಿತ್ರಿಕ ತೀರ್ಪು ನೀಡಿತು. ರಾಜ್ಯ ಸರ್ಕಾರವು 2016ರ ಮಾರ್ಚ್‌ 19ರಂದು ಎಸಿಬಿ ರಚನೆ ಮಾಡಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ, ಬೆಂಗಳೂರು ವಕೀಲರ ಸಂಘ ಮತ್ತು ವಕೀಲ ಬಿ.ಜಿ. ಚಿದಾನಂದ ಅರಸ್‌ ಸೇರಿದಂತೆ 15 ಜನರು ಸಲ್ಲಿಸಿದ್ದ ಪ್ರತ್ಯೇಕ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈದಿನ ಪ್ರಕಟಿಸಿತು. ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಎಚ್ಚರಿಕೆ ನೀಡಿ ನ್ಯಾಯಪೀಠ, ’ಈಗಾಗಲೇ ಎಸಿಬಿ ಮುಂದೆ ಬಾಕಿ ಇರುವ ತನಿಖಾ, ವಿಚಾರಣಾ ಮತ್ತು ಶಿಸ್ತುಕ್ರಮದ ಅಡಿಯಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಬೇಕು’ ಎಂದು ಹೇಳಿತು. 

2022: ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಖ್ಯಾತ ಗಾಯಕ, ತಮ್ಮ ಮೋಹಕ ಕಂಠದಿಂದ ನಾಡಿನ ಜನರ ಮನಸೂರೆಗೊಂಡಿದ್ದ ಶಿವಮೊಗ್ಗ ಸುಬ್ಬಣ್ಣ (83) ಅವರು ಬೆಂಗಳೂರಿನಲ್ಲಿ 2022 ಆಗಸ್ಟ್‌ 11ರ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಮಕ್ಕಳಾದ ಶ್ರೀರಂಗ ಮತ್ತು ಬಾಗೇಶ್ರೀ ಅವರನ್ನು ಸುಬ್ಬಣ್ಣ ಅಗಲಿದರು. ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಎಂಬ ಸಣ್ಣ ಊರಿನಲ್ಲಿ 1938ರ ಡಿಸೆಂಬರ್ 14ರಂದು ಜನಿಸಿದರು. ತಂದೆ ಗಣೇಶರಾಯರು, ತಾಯಿ ರಂಗನಾಯಕಿ. ತಾತ ಶಾಮಣ್ಣ, ನಂತರ ಎಂ. ಪ್ರಭಾಕರ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದರು. ಕವಿಗೀತೆಗಳನ್ನು ಹಾಡುವುದರಲ್ಲಿ ಆಕರ್ಷಿತರಾದ ಸುಬ್ಬಣ್ಣ ಅವರು, ಕುವೆಂಪು, ಬೇಂದ್ರೆ ಹಾಗೂ ನಾಡಿನ ಇನ್ನಿತರ ಶ್ರೇಷ್ಠ ಕವಿಗಳ ಕವಿತೆಗಳನ್ನು ರಾಗ ಸಂಯೋಜಿಸಿ ಹಾಡುವುದರ ಮೂಲಕ ಮನೆ ಮಾತಾದರು. ಬಿ.ಎ, ಬಿ.ಕಾಂ ಮತ್ತು ಎಲ್‌ಎಲ್‌ಬಿ ಪದವೀಧರಾದ ಶಿವಮೊಗ್ಗ ಸುಬ್ಬಣ್ಣ ಅವರು 1982ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ನೆಲೆಸಿದರು. 1979ರಲ್ಲಿ ‘ಕಾಡುಕುದುರೆ’ ಚಲನಚಿತ್ರದಲ್ಲಿ ಅವರು ಹಾಡಿದ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರಪ್ರಶಸ್ತಿ ಪಡೆದು, ಆ ಮೂಲಕ ಈ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಎನಿಸಿಕೊಂಡರು. ಆಕಾಶವಾಣಿ ಮತ್ತು ದೂರದರ್ಶನದ ‘ಎ’ ಟಾಪ್ ಶ್ರೇಣಿಯ ಗಾಯಕರಾಗಿದ್ದರು. 1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ, 2003ರಲ್ಲಿ ಬೆಂಗಳೂರು ಗಾಯನ ಸಮಾಜದಿಂದ ‘ವರ್ಷದ ಕಲಾವಿದ’ ಅಲ್ಲದೇ ಇನ್ನೂ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ದೊರೆತಿದ್ದವು. ರಾಷ್ಟ್ರವಲ್ಲದೇ ಅಮೆರಿಕ, ಸಿಂಗಾಪುರ ಮೊದಲಾದ ಕಡೆ ಸುಗಮ ಸಂಗೀತದ ಕಂಪು ಹರಡಿದ್ದರು. ಅವರ ನೂರಾರು ಧ್ವನಿಸುರಳಿಗಳು ನಾಡಿನ ಮೂಲೆಮೂಲೆಗೂ ತಲುಪಿವೆ. ಎರಡು ಬಾರಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾಗಿ ಕೆಲಸ ನಿರ್ವಹಿಸಿರುವ ಸುಬ್ಬಣ್ಣ ಅವರು, ಆಕಾಶವಾಣಿ ನಡೆಸುವ ವಾರ್ಷಿಕ ಸಂಗೀತ ಸ್ಪರ್ಧೆಗಳ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯ ಚಲನಚಿತ್ರ ಪ್ರಶಸ್ತಿಯ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.

2022: ನವದೆಹಲಿ: ಭಾರತ ದೇಶದ 14ನೇ ಉಪರಾಷ್ಟಪತಿಯಾಗಿ ಜಗದೀಪ್ ಧನ್ ಕರ್ ಅವರು 2022 ಆಗಸ್ಟ್‌ 11ರ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಧನ್ ಕರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಆಗಸ್ಟ್‌ 6 ರಂದು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆದಿದ್ದು. ಎನ್ ಡಿ ಎ ಅಭ್ಯರ್ಥಿ ಜಗದೀಪ್ ಧನಕರ್ ಅಧಿಕ ಮತಗಳನ್ನು ಪಡೆಯುವ ಮೂಲಕ ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ದೆಹಲಿಯ ಸಂಸತ್ ಭವನದಲ್ಲಿ ಆಗಸ್ಟ್‌ ೬ರಂದು ಬೆಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ಮತದಾನ ಪ್ರಕ್ರಿಯೆ ನಡೆದಿದ್ದು. ಲೋಕಸಭೆ ಮತ್ತು ರಾಜ್ಯಸಭೆ 780 ಸಂಸದರಲ್ಲಿ  725 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದಿದ್ದರು. ಎನ್ ಡಿ ಎ ಅಭ್ಯರ್ಥಿಯಾಗಿರುವ ಜಗದೀಪ್ ಧನಕರ್ ಅವರು 528 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಪ್ರಮಾಣ ವಚನ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್, ಹಲವಾರು ಗಣ್ಯರು  ಉಪಸ್ಥಿತರಿದ್ದರು.

2020: ಮಾಸ್ಕೊರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ವಿಶ್ವದ ಪ್ರಪ್ರಥಮ ಕೋವಿಡ್-೧೯ ಲಸಿಕೆ ’ಸ್ಪುಟ್ನಿಕ್-ವಿಗೆ ರಷ್ಯಾದ ಆರೋಗ್ಯ ಸಚಿವಾಲಯ 2020 ಆಗಸ್ಟ್  11ರ  ಮಂಗಳವಾರ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು ಜನರ ಬಳಕೆಗೆ ಬಿಡುಗಡೆಯಾಗಲಿದೆರಷ್ಯಾ ಅಧ್ಯಕ್ಷ ವ್ಯಾಡಿಮೀರ್ ಪುಟಿನ್ ಅವರ ಪುತ್ರಿಗೆ ಲಸಿಕೆಯನ್ನು ನೀಡಲಾಗಿದೆಕೊರೋನವೈರಸ್ ವಿರುದ್ಧ "ಸುಸ್ಥಿರ ರೋಗ ನಿರೋಧಕ ಶಕ್ತಿ ನೀಡುವ ಮೊದಲ ಲಸಿಕೆಯನ್ನು ರಷ್ಯಾ ಅಭಿವೃದ್ಧಿಪಡಿಸಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಕಟಿಸಿದರುಸೋವಿಯತ್ ಉಪಗ್ರಹದ ನಂತರ ಮಾಸ್ಕೋ ತನ್ನ ಹೊಸ ಕೊರೋನವೈರಸ್ ಲಸಿಕೆಯನ್ನು "ಸ್ಪುಟ್ನಿಕ್ ವಿಎಂಬುದಾಗಿ ಹೆಸರು ನೀಡಿದೆ ಎಂದು ಪುಟಿನ್ ಹೇಳಿದರು. "ಇಂದು ಬೆಳಗ್ಗೆವಿಶ್ವದಲ್ಲೇ ಮೊದಲ ಬಾರಿಗೆ ರಷ್ಯಾದಲ್ಲಿ ಹೊಸ ಕೊರೋನವೈರಸ್ ವಿರುದ್ಧ ಲಸಿಕೆ ನೋಂದಾಯಿಸಲಾಗಿದೆ ಎಂದು ಪುಟಿನ್ ಸರ್ಕಾರಿ ಮಂತ್ರಿಗಳೊಂದಿಗೆ ನಡೆಸಿದ ದೂರದರ್ಶನದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಿಳಿಸಿದರು. "ನನ್ನ ಹೆಣ್ಣುಮಕ್ಕಳಲ್ಲಿ ಒಬ್ಬರಿಗೆ  ಲಸಿಕೆ ನೀಡಲಾಗಿದೆ ಎಂದು ಪುಟಿನ್ ನುಡಿದರುಲಸಿಕೆಯ ಅಭಿವೃದ್ಧಿಗೆ ಕೆಲಸ ಮಾಡಿದ ಎಲ್ಲರಿಗೂ ಪುಟಿನ್ ಅವರು ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಇದನ್ನು "ಜಗತ್ತಿಗೆ ಬಹಳ ಮುಖ್ಯವಾದ ಹೆಜ್ಜೆಎಂದು ಬಣ್ಣಿಸಿದರುದೇಶದ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಕೊರೋನವೈರಸ್ ಲಸಿಕೆಯ ಸಾಮೂಹಿಕ ಉತ್ಪಾದನೆಯನ್ನು ಪ್ರಾರಂಭಿಸುತ್ತದೆ ಎಂದು ಅವರು ಆಶಿಸಿದರು. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

2020: ನವದೆಹಲಿಹೆಣ್ಣುಮಕ್ಕಳು ಹಿಂದೂ ಅವಿಭಜಿತ ಕುಟುಂಬದ ಆಸ್ತಿಯಲ್ಲಿನ ಸಮಾನತೆಯ ಹಕ್ಕಿನಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ 2020 ಆಗಸ್ಟ್  11ರ ಮಂಗಳವಾರ  ಮಹತ್ವದ ತೀರ್ಪು ನೀಡಿತು. ಹಿಂದೂ ಉತ್ತರಾಧಿಕಾರ (ತಿದ್ದುಪಡಿಕಾಯ್ದೆಗೆ ತಿದ್ದುಪಡಿ ತರಲಾದ ೨೦೦೫ ಕ್ಕೆ ಮೊದಲೇ ತಂದೆ ತೀರಿಕೊಂಡಿದ್ದರೂ ಸಹ ಜಂಟಿ ಹಿಂದೂ ಕುಟುಂಬ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾನ ಸಹವರ್ತಿ ಹಕ್ಕುಗಳಿವೆ ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾಎಸ್ ನಜೀರ್ ಮತ್ತು ಎಮ್‌ಆರ್ ಷಾ ಅವgನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ತೀರ್ಪು ನೀಡಿತು೧೯೫೬  ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ ೬ಕ್ಕೆ ಸೇರಿಸಲಾಗಿರುವ ವಿಧಿಗಳು ತಿದ್ದುಪಡಿಗೆ ಮೊದಲ ಅಥವಾ ನಂತರ ಜನಿಸಿದ ಪುತ್ರಿಗೆಪುತ್ರನಿಗೆ ಸಮಾನವಾದ ಹಕ್ಕು ಮತ್ತು ಹೊಣೆಗಾರಿಕೆಗಳೊಂದಿಗೆ ಸಹವರ್ತಿ (ಕೋಪಾರ್ಸೆನರ್ಸ್ಥಾನಮಾನವನ್ನು ನೀಡುತ್ತದೆ ಎಂದು ಪೀಠ ಹೇಳಿತುಕೋಪಾರ್ಸೆನರ್ ಎನ್ನುವುದು ಜನ್ಮದಿಂದ ಮಾತ್ರ ಪೋಷಕರ ಆಸ್ತಿಯಲ್ಲಿ ಕಾನೂನುಬದ್ಧ ಹಕ್ಕನ್ನು ಪಡೆದುಕೊಳ್ಳುವ ವ್ಯಕ್ತಿಗೆ ಬಳಸುವ ಪದವಾಗಿದೆನ್ಯಾಯಪೀಠವು, "ಸೆಪ್ಟೆಂಬರ್ ೨೦೦೫ ರಿಂದ ಜಾರಿಗೆ ಬಂದ ಸೆಕ್ಷನ್  ( ಪ್ರಕಾರಮಗಳು ೨೦೦೪ ಡಿಸೆಂಬರ್   ಮುನ್ನ ನಡೆದ ಇತ್ಯರ್ಥ ಅಥವಾ ಅನ್ಯೀಕರಣವಿಭಜನೆ ಅಥವಾ ಒಡಂಬಡಿಕೆಯ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಉಳಿತಾಯ ಸಹಿತವಾದ ಹಕ್ಕುಗಳನ್ನು ಪಡೆಯಬಹುದುಕೊಪಾರ್ಸೆನರಿಯಲ್ಲಿನ ಹಕ್ಕು ಹುಟ್ಟಿನಿಂದಲೇ ಇರುವುದರಿಂದಸೆಪ್ಟೆಂಬರ್ ೨೦೦೫ ರಲ್ಲಿ ಕೊಪಾರ್ಸೆನರ್ ತಂದೆ ಜೀವಂತವಾಗಿರುವುದು ಅನಿವಾರ್ಯವಲ್ಲ ಎಂದು ಪೀಠ ಹೇಳಿತು. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

2020: ನವದೆಹಲಿಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಒಂದು ದಿನದ ಬಳಿಕ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿ ಇರುವ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ ಎಂದು ಸೇನಾ ಸಂಶೋಧನಾ ಮತ್ತು ಚಿಕಿತ್ಸಾ ಆಸ್ಪತ್ರೆಯು 2020 ಆಗಸ್ಟ್  11ರ ಮಂಗಳವಾರ ತಿಳಿಸಿತು. ೮೪ರ ಹರೆಯದ ಮುಖರ್ಜಿ ಅವರನ್ನು ಸೋಮವಾರ ಮಧ್ಯಾಹ್ನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತುಶಸ್ತ್ರಚಿಕಿತ್ಸೆಗೂ ಮುನ್ನವೇ ಅವರಿಗೆ ಕೋವಿಡ್-೧೯ ಸೋಂಕು ತಗುಲಿತ್ತುದೆಹಲಿ ಕಂಟೋನ್ಮೆಂಟ್ ಪ್ರದೇಶದ ಸೇನಾ ಆಸ್ಪತ್ರೆಗೆ ದಾಖಲಾಗಿರುವ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯು ಇನ್ನೂ ಗಂಭೀರವಾಗಿಯೇ ಇದೆಆಗಸ್ಟ್ ೧೦ರಂದು ಮೆದುಳಿನ ಹೆಪ್ಪುಗಟ್ಟುವಿಕೆಯ ಕಾರಣ ಪ್ರಾಣರಕ್ಷಕ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ರಾಷ್ಟ್ರಪತಿಯವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲಬದಲಿಗೆ ಆರೋಗ್ಯ ಇನ್ನಷ್ಟು ಹದಗೆಟ್ಟಿದೆಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆತಜ್ಞ ವೈದ್ಯರ ತಂಡ ಮಾಜಿ ರಾಷ್ಟ್ರಪತಿಯವರ ಆರೋಗ್ಯದ ಮೇಲೆ ನಿರಂತರ ನಿಗಾ ಇಟ್ಟಿದೆ. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

 2020: ಇಂದೋರ್ (ಮಧ್ಯಪ್ರದೇಶ): ಸಮಕಾಲೀನ ಉರ್ದು ಕವಿಗಳಲ್ಲಿ ಒಬ್ಬರಾದ ಖ್ಯಾತ ಉರ್ದು ಕವಿ ರಾಹತ್ ಇಂದೋರಿ ಅವರು 2020 ಆಗಸ್ಟ್  11ರ ಮಂಗಳವಾರ ಮಧ್ಯಪ್ರದೇಶದ ಇಂದೋರಿನ  ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಪುತ್ರ ಸತ್ಲಾಜ್ ಇಂದೋರಿ ತಿಳಿಸಿದರು. ಅವರಿಗೆ ೭೦ ವರ್ಷ ವಯಸ್ಸಾಗಿತ್ತುಇಂದೋರಿ ಅವರಿಗೆ ಕೊರೋನಾವೈರಸ್ ಸೋಂಕು ತಗುಲಿದ್ದು ಭಾನುವಾರ ದೃಢಪಟ್ಟಿತ್ತು. "ಅವರನ್ನು ಕೊರೋನವೈರಸ್ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತುಆದರೆ ಹೃದಯಾಘಾತದಿಂದ ನಿಧನರಾದರುಎಂದು ಸತ್ಲಾಜ್ ಇಂದೋರಿ ಹೇಳಿದರುಇಂದೋರಿ ಅವರಿಗೆ ಸೋಮವಾರ ಎರಡು ಬಾರಿ ಹೃದಯಾಘಾತವಾಗಿದೆ ಎಂದು ಶ್ರೀ ಅರಬಿಂದೋ ಆಸ್ಪತ್ರೆಯ ವೈದ್ಯರು ತಿಳಿಸಿದರು. "ಕೋವಿಡ್ -೧೯ ಸೋಂಕು ತಗುಲಿದ್ದು ಖಚಿತವಾದ ಬಳಿಕ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತುಅವರಿಗೆ ಶೇಕಡಾ ೬೦ರಷ್ಟು ನ್ಯುಮೋನಿಯಾ ಇತ್ತುಎಂದು ಡಾ.ವಿನೋದ್ ಭಂಡಾರಿ ಹೇಳಿದರು೭೦  ಹರೆಯದ ಇಂದೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿದ್ದರು ಮತ್ತು ಮಂಗಳವಾರ ಬೆಳಿಗ್ಗೆ ಅವರು ಕೋವಿಡ್ ದೃಢಪಟ್ಟ ವರದಿಯ ಬಗ್ಗೆ ಟ್ವೀಟ್ ಮಾಡಿಸಾಮಾಜಿಕ ಮಾಧ್ಯಮಗಳ ಮೂಲಕ ಆರೋಗ್ಯದ ಬಗ್ಗೆ ವಿವರ ನೀಡುವುದಾಗಿ ತಿಳಿಸಿದ್ದರು. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

2020: ನವದೆಹಲಿಕೊರೋನವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಾಮೂಹಿಕ ಸಾರಿಗೆ ವ್ಯವಸ್ಥೆಗೆ ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಉಲ್ಲೇಖಿಸಿ ಉಪನಗರ ಸೇವೆಗಳು ಸೇರಿದಂತೆ ನಿಯಮಿತ ರೈಲ್ವೆ ಸೇವೆಗಳನ್ನು ಮುಂದಿನ ಸೂಚನೆ ಬರುವವರೆಗೂ ಸ್ಥಗಿತಗೊಳಿಸಲಾಗುವುದು ಎಂದು ರೈಲ್ವೆ ಸಚಿವಾಲಯ 2020 ಆಗಸ್ಟ್ 11ರ ಮಂಗಳವಾರ ಪ್ರಕಟಿಸಿತುಸರ್ಕಾರದ ಕೊನೆಯ ಆದೇಶದ ಪ್ರಕಾರರೈಲ್ವೇ ಸೇವೆಗಳ ಅಮಾತನ್ನು ಆಗಸ್ಟ್ ೧೨ ರವರೆಗೆ ವಿಸ್ತರಿಸಲಾಗಿತ್ತುರಾಜ್ಯ ಸರ್ಕಾರಗಳ ವಿನಂತಿ ಮೇರೆಗೆಆಯ್ದ ತಾಣಗಳ ನಡುವೆ ಪ್ರಸ್ತುತ ಚಲಿಸುತ್ತಿರುವ ೨೩೦ ವಿಶೇಷ ರೈಲುಗಳು ಮುಂಬೈನ ಸ್ಥಳೀಯ ರೈಲುಗಳ ಜೊತೆಗೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಲಿವೆ ಎಂದು ಸಚಿವಾಲಯವು ಸೂಚಿಸಿದೆಪ್ರಸ್ತುತ ಅಗತ್ಯ ಸೇವೆಗಳೊಂದಿಗೆ ಕೆಲಸ ಮಾಡುವ ಸಿಬ್ಬಂದಿಯನ್ನು ಮಾತ್ರ ಇದಕ್ಕಾಗಿ ಬಳಸಲಾಗುತ್ತಿದೆವಿಶೇಷ ರೈಲುಗಳ ಬೋಗಿಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಅವಶ್ಯಕತೆಯ ಆಧಾರದ ಮೇಲೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಬಹುದು ಎಂದು ಸಚಿವಾಲಯ ತಿಳಿಸಿತು. "ಆದಾಗ್ಯೂದಿಗ್ಬಂಧನಕ್ಕೆ ಮುಂಚಿತವಾಗಿ ಚಲಿಸುತ್ತಿದ್ದ ಎಲ್ಲ್ಲ ಇತರ ಸಾಮಾನ್ಯ ರೈಲುಗಳು ಮತ್ತು ಉಪನಗರ ರೈಲುಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿತು. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

2020: ಜೈಪುರಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಶಾಂತಿ ಒಪ್ಪಂದಕ್ಕೆ ಮೊಹರು ಹಾಕಿದ ಒಂದು ದಿನದ ನಂತರ, 2020 ಆಗಸ್ಟ್ 11ರ ಮಂಗಳವಾರ ಜೈಪುರಕ್ಕೆ ವಾಪಸಾದ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ’ಪಕ್ಷದಿಂದ ಯಾವುದೇ ಹುದ್ದೆಗೆ ಒತ್ತಾಯಿಸಿಲ್ಲ ಎಂದು ಸ್ಪಷ್ಟ ಪಡಿಸಿದರು. ‘ನಾನು ಪಕ್ಷದಿಂದ ಯಾವುದೇ ಹುದ್ದೆಯನ್ನು ಕೋರಿಲ್ಲ ಆದರೆ ಶಾಸಕರು ಸಮಸ್ಯೆಗಳನ್ನು ಎತ್ತಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ರಾಜಕೀಯ ರಾಜಕೀಯ ಇರಬಾರದು ಎಂದು ಹೇಳಿದ್ದಾರೆ ಎಂದು ಪೈಲಟ್ ತಮ್ಮ ನಿವಾಸದಲ್ಲಿ ಸುದ್ದಿಗಾರರಿಗೆ ತಿಳಿಸಿದರುಕಾರ್ಯವೈಖರಿ ಅಥವಾ ಆಲೋಚನೆಗಳ ಮೇಲೆ ಭಿನ್ನಾಭಿಪ್ರಾಯಗಳು ಸೈದ್ಧಾಂತಿಕವಾಗಿರಬಹುದುಆದರೆ ರಾಜಕೀಯದಲ್ಲಿಸೇಡಿಗೆ ಸ್ಥಳವಿಲ್ಲ ಎಂದು ಅವರು ಹೇಳಿದರು. "ನಾನು ಎಲ್ಲ ನಾಯಕರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇ ಎಂದು ಅವರು ಹೇಳಿದರು. "ಪಕ್ಷದ ನಾಯಕತ್ವವು ಕಾರ್ಯವೈಖರಿಅಭಿವೃದ್ಧಿಕಾರ್ಮಿಕರ ಭಾಗವಹಿಸುವಿಕೆಸ್ವಾಭಿಮಾನ ಇತ್ಯಾದಿಗಳಿಗೆ ಸಂಬಂಧಿಸಿದ ನಮ್ಮ ಸಮಸ್ಯೆಯನ್ನು ಪರಿಶೀಲಿಸಲು ಮುಂದಾಗಿರುವುದು ನನಗೆ ಸಂತಸ ತಂದಿದೆಎಐಸಿಸಿಯು ಒಂದು ಸಮಿತಿಯನ್ನು ರಚಿಸಿದೆಅದು ಸಮಯಕ್ಕೆ ತಕ್ಕಂತೆ ಸಮಸ್ಯೆಗಳನ್ನು ಬಗೆಹರಿಸುತ್ತದೆಎಂದು ಪೈಲಟ್ ಹೇಳಿದರುಜೈಪುರಕ್ಕೆ ಆಗಮಿಸಿದಾಗಅವರ ಪರವಾಗಿ ಘೋಷಣೆಗಳನ್ನು ಕೂಗುವ ಮೂಲಕ ಕಾರ್‍ಯಕರ್ತರ ದೊಡ್ಡ ಗುಂಪು ಪೈಲಟ್ ಅವರನ್ನು ಸ್ವಾಗತಿಸಿತು. ನಮ್ಮ ಬಂಡಾಯ ಎಂದಿಗೂ "ಪಕ್ಷ ವಿರೋಧಿ ಅಲ್ಲಆದರೆ ರಾಜಸ್ಥಾನದಲ್ಲಿ ನಡೆದ ಘಟನೆಗಳನ್ನು ನಿರೂಪಿಸುವ ಸಾಧನವಾಗಿದೆ ಎಂದು ಇದಕ್ಕೂ ಮುನ್ನ ಪೈಲಟ್ ಹೇಳಿದ್ದರು. (ವಿವರಗಳಿಗೆ ಇಲ್ಲಿ  ಕ್ಲಿಕ್   ಮಾಡಿರಿ)

ಇಂದಿನ ಇತಿಹಾಸ  History Today ಆಗಸ್ಟ್ 11 (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

No comments:

Advertisement