ವಿಟ್ಲಾಯನದ ಕೊನೆಯ ದಿನ
೨೦೨೩ ಜನವರಿ ೨೨ ಭಾನುವಾರ. ಇಂದು ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವದ ಕೊನೆಯ ದಿನ.ಶನಿವಾರ ʼಬೆಡಿʼಯ ಮಧ್ಯೆ ಮಹಾರಥೋತ್ಸವದ ಬಳಿಕ ಬೀದಿ ಮೆರವಣಿಗೆ ಶಯನೋತ್ಸವ ನಡೆದು ವಿಶ್ರಾಂತಿ ಪಡೆಯುವ ದೇವರನ್ನು ಭಾನುವಾರ ಈದಿನ ಬೆಳಗ್ಗೆ ಎಬ್ಬಿಸಿ ಕವಟೋದ್ಘಾಟನೆ , ಬಳಿಕ ಮಹಾಪೂಜೆ ನಡೆಯುತ್ತದೆ. ಈ ವೇಳೆಯಲ್ಲಿ ಬಟ್ಲು ಕಾಣಿಕೆ, ತುಲಾಭಾರ ಸೇವೆ ನಡೆಯುತ್ತದೆ.
ಓಕುಳಿಕಟ್ಟೆಯಲ್ಲಿ ಕಟ್ಟೆ ಪೂಜೆಗಾಗಿ ದೇವಾಲಯದ ಒಳಗಿನಿಂದ ಹೊರ ಬರುತ್ತಿರುವ ದೃಶ್ಯದ ವಿಡಿಯೋ ಇಲ್ಲಿದೆ:
ರಾತ್ರಿ ದೇವಸ್ಥಾನದ ಒಳಗಿನ ಬಲಿಯ ಬಳಿಕ ಹೊರಗೆ ಓಕುಳಿ ಕಟ್ಟೆಯಲ್ಲಿ ಕಟ್ಟೆ ಪೂಜೆ. ಕಟ್ಟೆ ಪೂಜೆಯ ಬಳಿಕ ಶ್ರೀವರಿಗೆ ಅಷ್ಟಾವಧಾನ ಸೇವೆ. ಅಲ್ಲಿಂದ ಕೊಡಂಗಾಯಿಗೆ ಅವಭೃತ ಸ್ನಾನಕ್ಕೆ ಸವಾರಿ,
ಈ ಸವಾರಿಯಲ್ಲಿ ಪ್ರಾಥಮಿಕ ಶಾಲೆ, ಕೂಡೂರು ಕಟ್ಟೆ, ನೆತ್ರಕೆರೆ ಕಟ್ಟೆಗಳು, ಕಡಂಬು ಕಟ್ಟೆ ಸೇರಿದಂತೆ ವಿವಿಧ ಕಟ್ಟೆಗಳಲ್ಲಿ ಕಟ್ಟೆ ಪೂಜೆಗಳು ನಡೆಯುತ್ತದೆ. ಇಲ್ಲಿನ ಭಕ್ತಾದಿಗಳು ತಮ್ಮ ತಮ್ಮ ಪ್ರದೇಶದ ಕಟ್ಟೆಗೆ ಬರುವ ದೇವರನ್ನು ಸಂಭ್ರಮೋತ್ಸಾಹದೊಂದಿಗೆ ಸ್ವಾಗತಿಸಿ, ಪೂಜೆ ನೀಡಿ ಬೀಳ್ಕೊಡುತ್ತಾರೆ.ಕೊಡಂಗಾಯಿಯಲ್ಲಿ ಅವಭೃತ ಸ್ನಾನದ ಬಳಿಕ ಮರಳಿ ದೇವಸ್ಥಾನಕ್ಕೆ ವಾಪಸ್. ಬರುವಾಗ ಪುನಃ ಭಕ್ತಾದಿಗಳಿಂದ ಅಲ್ಲಲ್ಲಿ ಪೂಜೆ ಮಂಗಳಾರತಿ. ಕೊನೆಗೆ ಧ್ವಜಾವರೋಹಣ, ಸಂಪ್ರೋಕ್ಷಣೆಯೊಂದಿಗೆ ವಿಟ್ಲ ಜಾತ್ರೆಗೆ ತೆರೆ.
ಇಲ್ಲಿ ಶನಿವಾರದ ಮಹಾರಥೋತ್ಸವದ ಚಿತ್ರ ಹಾಗೂ ʼಬೆಡಿʼ ಸಂಭ್ರಮದ ವಿಡಿಯೋವನ್ನು ನೋಡಬಹುದು. (ಚಿತ್ರ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್ ಗ್ರೂಪ್).
ವಿಟ್ಲ ಜಾತ್ರೆಯ ಹಿಂದಿನ ಸುದ್ದಿಗಳನ್ನು ಕೆಳಗೆ ಕ್ಲಿಕ್ ಮಾಡಿರಿ:
No comments:
Post a Comment