Wednesday, June 5, 2024

ಮೋದಿಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಲಿಖಿತ ಬೆಂಬಲ

 ಮೋದಿಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಲಿಖಿತ ಬೆಂಬಲ

ಮೂರನೇ ಬಾರಿಗೆ ಎನ್‌ಡಿಎ ಸರ್ಕಾರ ರಚನೆ

ವದೆಹಲಿ: ದೆಹಲಿಯಲ್ಲಿ 2024 ಜೂನ್‌ 05ರ ಬುಧವಾರ ಅಂಗೀಕರಿಸಿದ ನಿರ್ಣಯದಲ್ಲಿ ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಪಾಲು ಸ್ಥಾನಗಳನ್ನು ಗೆದ್ದ ಒಂದು ದಿನದ ಬಳಿಕ ಅವರು ಮೋದಿ ಅವರ ನಿವಾಸದಲ್ಲಿ ಸಭೆ ಸೇರಿ, ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ನರೇಂದ್ರ ಮೋದಿ ಅವರಿಗೆ ದಾರಿ ಮಾಡಿಕೊಟ್ಟರು.

ಎನ್‌ಡಿಎ ಸರ್ಕಾರವು ಜನರ ಜೀವನ ಮಟ್ಟವನ್ನು ಸುಧಾರಿಸಲು ಮತ್ತು ತನ್ನ ಪರಂಪರೆಯನ್ನು ಉಳಿಸಿಕೊಂಡು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ನಿರ್ಣಯವು ಹೇಳಿತು.

"2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಗ್ಗಟ್ಟಿನಿಂದ ಹೋರಾಡಿ ಗೆದ್ದಿರುವುದಕ್ಕೆ ನಾವೆಲ್ಲರೂ ಹೆಮ್ಮೆಪಡುತ್ತೇವೆ. ನಾವೆಲ್ಲ ಎನ್‌ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ನಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುತ್ತೇವೆ" ಎಂದೂ ನಿರ್ಣಯ ಹೇಳಿತು.

ಜೂನ್ 7 ರಂದು ಎನ್‌ಡಿಎ ಸಂಸದರ ಜೊತೆಗಿನ ಸಭೆಯ ನಂತರ ಮಿತ್ರಪಕ್ಷಗಳು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿವೆ ಎಂದು ಸುದ್ದಿ ಮೂಲಗಳು ತಿಳಿಸಿದವು.

ಏತನ್ಮಧ್ಯೆ, ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮೈತ್ರಿಕೂಟದೊಂದಿಗೆ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿದವು.

ಇವುಗಳನ್ನೂ ಓದಿ:

ಪ್ರಧಾನಿ ಮೋದಿ ರಾಜೀನಾಮೆ, ಶನಿವಾರ ಪ್ರಮಾಣ ವಚನ?
ಇವರೆಲ್ಲ ಭಾರತದ ಈವರೆಗಿನ ಪ್ರಧಾನಿಗಳು, ಮುಂದಿನ ಪ್ರಧಾನಿ …… ?
ಕನ್ಯಾಕುಮಾರಿಯ ಧ್ಯಾನ: ಪ್ರಧಾನಿ ಮೋದಿ ಹೊಸ ಸಂಕಲ್ಪಗಳು
ಅರುಣಾಚಲ ಪ್ರದೇಶ: ಬಿಜೆಪಿ ಹ್ಯಾಟ್ರಿಕ್, ಸಿಕ್ಕಿಂನಲ್ಲಿ ಎಸ್‌ಕೆಎಂ ಜಯಭೇರಿ

No comments:

Advertisement