ಕೋಲ್ಕತ: ಪೌರತ್ವ
ತಿದ್ದುಪಡಿ ಕಾಯ್ದೆಯು ನಿಮ್ಮ ಪೌರತ್ವ ಕಿತ್ತುಕೊಳ್ಳುವುದಿಲ್ಲ. ಬದಲಾಗಿ ಪೌರತ್ವ ನೀಡುತ್ತದೆ ಎಂದು
ಪ್ರಧಾನಿ ನರೇಂದ್ರ
ಮೋದಿ
2020 ಜನವರಿ 12ರ ಭಾನುವಾರ ಪುನರುಚ್ಚರಿಸಿದರು.
ಕೋಲ್ಕತದ ರಾಮಕೃಷ್ಣ ಮಿಷನ್ ಮುಖ್ಯಕಚೇರಿ ಬೇಲೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾತ್ರಿ ಹಗಲಾಗುವುದರೊಳಗೆ ಜಾರಿಗೆ ತರಲಿಲ್ಲ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಿ ಸದಸ್ಯರ ಅಂಗೀಕಾರ ಸಿಕ್ಕಿದ ಮೇಲೆಯೇ ಜಾರಿಯಾಗಿದ್ದು. ಇದರ ಬಗ್ಗೆ ಯುವಕರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸಲಾಗುತ್ತಿದೆ. ಯುವಜನತೆಗೆ ಇದನ್ನು ಅರ್ಥ ಮಾಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಸಿಎಎಯಿಂದಾಗಿ
ಜನರಿಗೆ ಈಗ ಪಾಕಿಸ್ತಾನ,
ಬಾಂಗ್ಲಾದೇಶ, ಆಫ್ಘಾನಿಸ್ತಾನಗಳ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಕಿರುಕುಳದ ಬಗ್ಗೆ ಅರಿವಾಗುತ್ತಿದೆ. ಹೀಗಿರುವಾಗ ವಿರೋಧ ಪಕ್ಷಗಳ ನಾಯಕರು ರಾಜಕೀಯ ಲಾಭಕ್ಕಾಗಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಮಹಾತ್ಮಾ ಗಾಂಧಿ ಮತ್ತು ಇತರ ನಾಯಕರು ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗುವ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಬೇಕೆಂದೇ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.
ಕಾಯ್ದೆಯನ್ನು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಆದರೆ, ಇದರಲ್ಲಿ ರಾಜಕೀಯ ಆಟವನ್ನು ಆಡುತ್ತಿರುವವರು ಅರ್ಥ ಮಾಡಿಕೊಳ್ಳುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುತ್ತಿದ್ದಾರೆ. ಕಾಯ್ದೆ ಬಗ್ಗೆ ಎಲ್ಲೆಡೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಯಾವಾಗಲೂ ಸ್ವಾಮಿ ವಿವೇಕಾನಂದ ಅವರನ್ನು ಸ್ಮರಿಸಬೇಕು. ನನಗೆ ನೂರು ಉತ್ಸಾಹಿ ಯವಕರನ್ನು ಕೊಡಿ ನಾನು ಖಂಡಿತವಾಗಿ ಭಾರತದ ಸುಧಾರಣೆ ಮಾಡುತ್ತೇನೆಂಬ ಅವರ ಅಪ್ರತಿಮ ಹೇಳಿಕೆಯನ್ನು ಸದಾ ಗಮನದಲ್ಲಿಟ್ಟುಕೊಳ್ಳಬೇಕು. ಕೆಲವೊಂದು ಒಳ್ಳೆಯ ಕೆಲಸವನ್ನು ಮಾಡುವಾಗ ನಮ್ಮ ಶಕ್ತಿ ಮತ್ತು ಒಳ್ಳೆಯ ಮನೋಭಾವ ಕೆಲಸದಲ್ಲಿ ಬದಲಾವಣೆ ಕಾಣಲು ತುಂಬಾ ಅವಶ್ಯಕ ಎಂದು ಪ್ರಧಾನಿ ತಿಳಿಸಿದರು.

No comments:
Post a Comment