ಅಕ್ಷಯ್ ಕ್ಷಮಾದಾನ ಅರ್ಜಿಗೆ ರಾಷ್ಟ್ರಪತಿ ಕೋವಿಂದ್ ತಿರಸ್ಕಾರ
ನವದೆಹಲಿ: ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದ ಇನ್ನೊಂದು ಮಹತ್ವದ
ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 2020 ಫೆಬ್ರುವರಿ 05ರ ಬುಧವಾರ ನಾಲ್ವರು ಶಿಕ್ಷಿತ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್
ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದರು.
ಅಕ್ಷಯ್ ಕುಮಾರ್ ಸಿಂಗ್ ಕೆಲವು ದಿನಗಳ ಹಿಂದೆ ರಾಷ್ಟ್ರಪತಿಯವರಿಗೆ
ಕ್ಷಮಾದಾನ ಕೋರಿಕೆ ಅರ್ಜಿ ಸಲ್ಲಿಸಿದ್ದು, ಅದು ಈಗ ತಿರಸ್ಕೃತಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ರಾಷ್ಟ್ರಪತಿ ಕೋವಿಂದ್ ಅವರು ಈ ಹಿಂದೆಯೇ ಅಪರಾಧಿಗಳಾದ ಮುಕೇಶ್
ಸಿಂಗ್ ಮತ್ತು ವಿನಯ್ ಶರ್ಮ ಅರ್ಜಿಗಳನ್ನು ತಿರಸ್ಕರಿಸಿದ್ದರು.
No comments:
Post a Comment