ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಗಂಭೀರ
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಒಂದು ದಿನದ ಬಳಿಕ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿ ಇರುವ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ ಎಂದು ಸೇನಾ ಸಂಶೋಧನಾ ಮತ್ತು ಚಿಕಿತ್ಸಾ ಆಸ್ಪತ್ರೆಯು 2020 ಆಗಸ್ಟ್ 11ರ ಮಂಗಳವಾರ ತಿಳಿಸಿತು.
೮೪ರ ಹರೆಯದ ಮುಖರ್ಜಿ ಅವರನ್ನು ಸೋಮವಾರ ಮಧ್ಯಾಹ್ನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನವೇ ಅವರಿಗೆ ಕೋವಿಡ್-೧೯ ಸೋಂಕು ತಗುಲಿತ್ತು.
’ದೆಹಲಿ ಕಂಟೋನ್ಮೆಂಟ್ ಪ್ರದೇಶದ ಸೇನಾ ಆಸ್ಪತ್ರೆಗೆ ದಾಖಲಾಗಿರುವ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯು ಇನ್ನೂ ಗಂಭೀರವಾಗಿಯೇ ಇದೆ. ಆಗಸ್ಟ್ ೧೦ರಂದು ಮೆದುಳಿನ ಹೆಪ್ಪುಗಟ್ಟುವಿಕೆಯ ಕಾರಣ ಪ್ರಾಣರಕ್ಷಕ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ರಾಷ್ಟ್ರಪತಿಯವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲ. ಬದಲಿಗೆ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ’ ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.
ತಜ್ಞ ವೈದ್ಯರ ತಂಡ ಮಾಜಿ ರಾಷ್ಟ್ರಪತಿಯವರ ಆರೋಗ್ಯದ ಮೇಲೆ ನಿರಂತರ ನಿಗಾ ಇಟ್ಟಿದೆ.
No comments:
Post a Comment