ಬಿಹಾರ: ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿ
ಪಟ್ನಾ: ಬಿಹಾರದಲ್ಲಿ ಎನ್ ಡಿಎ ನಾಯಕರಾಗಿ ನಿತೀಶ್ ಕುಮಾರ್ ಅವರನ್ನು ಸರ್ವಾನುಮತದಿಂದ 2020 ನವೆಂಬರ್ 15ರ ಭಾನುವಾರ ಆಯ್ಕೆ ಮಾಡಲಾಗಿದ್ದು, ಹಕ್ಕು ಮಂಡನೆಯ ಬಳಿಕ ಸರ್ಕಾರ ರಚಿಸುವಂತೆ ರಾಜ್ಯಪಾಲರು ಅವರಿಗೆ ಆಹ್ವಾನ ನೀಡಿದ್ದಾರೆ. ನಿತೀಶ ಕುಮಾರ್ ಅವರು 2020 ನವೆಂಬರ್ 16ರ ಸೋಮವಾರ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿಯ
ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕಟಿಹಾರ್ ಶಾಸಕ ತಾರ್ ಕಿಶೊರ್ ಪ್ರಸಾದ್ ಅವರನ್ನು ವಿಧಾನಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ರಕ್ಷಣಾ
ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
No comments:
Post a Comment