Saturday, July 9, 2022

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಪಲಾಯನ

 ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಪಲಾಯನ


ಕೊಲಂಬೋ (ಶ್ರೀಲಂಕಾ): ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಅಧಿಕೃತ ನಿವಾಸದಿಂದ 2022 ಜುಲೈ o9ರ ಶನಿವಾರ ಪಲಾಯನಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಬೃಹತ್‌ ಸಂಖ್ಯೆಯಲ್ಲಿ ಪ್ರತಿಭಟನಕಾರರು ಗೊಟಬಯ ನಿವಾಸಕ್ಕೆ ಮುತ್ತಿಗೆ ಹಾಕಿ ಅದನ್ನು ವಶಕ್ಕೆ ಪಡೆದುಕೊಂಡಿದ್ದು ಅದಕ್ಕೆ ಮುನ್ನವೇ ಅಧ್ಯಕ್ಷರನ್ನು ಅಲ್ಲಿಂದ ಸುರಕ್ಷಿತವಾಗಿ ಹೊರಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿದವು.


ಉದ್ರಿಕ್ತ ಜನಸಮುದಾಯವನ್ನು ತಡೆಯಲು ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಘಟನೆಯಲ್ಲಿ ಪೊಲೀಸರೂ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದೂ ವರದಿಗಳು ಹೇಳಿವೆ.

No comments:

Advertisement